Mysore
18
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಬೆಂಗಳೂರಿನಲ್ಲಿ ಭೀಕರ ಅಪಘಾತ: ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೆಣ್ಣೂರು ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್‌ ಕ್ವಾಟ್ರಸ್‌ ಬಳಿಯೇ ಈ ಅವಘಡ ಸಂಭವಿಸಿದೆ.

ಮೃತ ಮಕ್ಕಳನ್ನು ವರ್ಷಾ(2), ಭಾನು(4) ಎಂದು ಗುರುತಿಸಲಾಗಿದೆ.

ಕಾನ್ಸ್‌ಟೇಬಲ್‌ ನಾಗನಗೌಡ ಅವರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಶಾಲಾ ಬಸ್ಸೊಂದು ಯುಟರ್ನ್‌ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಮಕ್ಕಳಿಬರಬು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ಮಕ್ಕಳ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!