ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾಟ್ರಸ್ ಬಳಿಯೇ ಈ ಅವಘಡ ಸಂಭವಿಸಿದೆ.
ಮೃತ ಮಕ್ಕಳನ್ನು ವರ್ಷಾ(2), ಭಾನು(4) ಎಂದು ಗುರುತಿಸಲಾಗಿದೆ.
ಕಾನ್ಸ್‌ಟೇಬಲ್ ನಾಗನಗೌಡ ಅವರು ಮಕ್ಕಳನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಶಾಲಾ ಬಸ್ಸೊಂದು ಯುಟರ್ನ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಕ್ಕಳಿಬರಬು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮಕ್ಕಳ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…