ಬೆಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಎರಡು ದಿನಗಳ ಕಾಲ (ಮಾ.4 ಮತ್ತು 5) ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.
ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ.
ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು (ಡಿ.ಇ.ಓ) ಮತ್ತು ಚುನಾವಣಾ ನೋಂದಣ ಅಧಿಕಾರಿಗಳನ್ನು (ಇ.ಆರ್.ಓ) ನಾಮನಿರ್ದೇಶನ ಮಾಡಲು ಸೂಚನೆ ನೀಡಲಾಗಿದೆ.
ಶಾಸನಬದ್ಧ ಅಧಿಕಾರಿಗಳಾಗಿ, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಚುನಾವಣಾ ನೋಂದಣಾ ಅಧಿಕಾರಿಗಳು (ಇ.ಆರ್.ಓ) ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸಲು ಈ ಸಮ್ಮೇಳನವು ಅಗತ್ಯ ಮಾಹಿತಿಯನ್ನು ಒದಗಿಸಲಿದೆ.
ಸಮ್ಮೇಳನದ ಮೊದಲನ ದಿನ ಆಧುನಿಕ ಚುನಾವಣಾ ನಿರ್ವಹಣೆಯ ಪ್ರಮುಖ ಕ್ಷೇತ್ರಗಳ ಬಗ್ಗೆ ಮಾಹಿತಿ ತಂತ್ರಜ್ಞಾನ, ಪರಿಣಾಮಕಾರಿ ಸಂವಹನ, ಸಾಮಾಜಿಕ ಮಾಧ್ಯಮವನ್ನು ಹೆಚ್ಚಿಸುವುದು ಮತ್ತು ಚುನಾವಣಾ ಪ್ರಕ್ರಿಯೆಗಳಲ್ಲಿ ವಿಭಿನ್ನ ಕಾರ್ಯಕರ್ತರ ಶಾಸನಬದ್ಧ ಪಾತ್ರದ ಕುರಿತು ಚರ್ಚೆಗಳನ್ನು ನಡೆಸಲಿದೆ.
ಎರಡನೇ ದಿನ, ರಾಜ್ಯಗಳು ಮತ್ತು ಕೇಂದ್ರಾಡಳಿತದ ಮುಖ್ಯ ಚುನಾವಣಾಧಿಕಾರಿಗಳು ಹಿಂದಿನ ದಿನದ ವಿಷಯಾಧಾರಿತ ಚರ್ಚೆಗಳ ಕುರಿತು ಆಯಾ ಕ್ರಿಯಾ ಯೋಜನೆಯನ್ನು ಪ್ರಸ್ತುತಪಡಿಸುತ್ತಾರೆ ಎಂದು ಭಾರತ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…