ಬೆಂಗಳೂರು: ಮಾರ್ಚ್.11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಹಾಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ಮಳೆಯಾದರೂ ತಾಪಮಾನದಲ್ಲಿ ಕುಸಿತವಾಗುವುದಿಲ್ಲ. ಮುಂದಿನ ದಿನಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ಗೂ ಏರಿಕೆಯಾಗಬಹುದು ಎಂದು ಮಾಹಿತಿ ನೀಡಿದೆ.





