Mysore
23
broken clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ನಿನ್ನೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!