Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಹೊರಗಡೆ ಹೋಗುವ ಮುನ್ನ ಜನತೆ ಎಚ್ಚರಿಕೆ ವಹಿಸಬೇಕಾಗಿ ಹವಾಮಾನ ಇಲಾಖೆ ಖಡಕ್‌ ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಇಂದು, ನಾಳೆ ಹಾಗೂ ಅಕ್ಟೋಬರ್.‌17ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇನ್ನು ನೆರೆಯ ಕೇರಳ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲೂ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

 

 

 

 

Tags: