ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಮಧ್ಯ ಹಾಗೂ ದಕ್ಷಿಣ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಹೊರಗಡೆ ಹೋಗುವ ಮುನ್ನ ಜನತೆ ಎಚ್ಚರಿಕೆ ವಹಿಸಬೇಕಾಗಿ ಹವಾಮಾನ ಇಲಾಖೆ ಖಡಕ್ ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಇಂದು, ನಾಳೆ ಹಾಗೂ ಅಕ್ಟೋಬರ್.17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ನೆರೆಯ ಕೇರಳ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲೂ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…