ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರದಿಂದ ಮೋಡ ಕವಿದ ವಾತಾವರಣ ಕಂಡುಬಂದಿದೆ.
ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಭಾಗದಲ್ಲಿ ಇಂದು ಹಾಗೂ ನಾಳೆ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಉಳಿದ ಜಿಲ್ಲೆಗಳಲ್ಲೂ ಮೋಡ ಕವಿದ ವಾತಾವರಣ, ತಂಪಾದ ಗಾಳಿ ಬೀಸುತ್ತಿರುವುದು ಸೇರಿದಂತೆ ಇತರೆ ಕಾರಣಗಳಿಂದ ಚಳಿ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.





