ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಜಿಟಿ ಜಿಟಿ ಮಳೆಯಾಗಿದ್ದು, ಕೆಲವು ಕಡೆ ಮೋದ ಕವಿದ ವಾತಾವರಣ ಕಂಡುಬಂದಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಕೊಡಗು, ಚಾಮರಾಜನಗರ, ಮೈಸೂರು ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನ ತುಂತುರು ಮಳೆಯಾಗಲಿದೆ.
ಕೆಲವು ಜಿಲ್ಲೆಗಳಲ್ಲಿ ಜನವರಿ.28ರವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ದಿನದ ನಂತರ ಬಿಸಿಲಿನ ವಾತಾವರಣ ಮರುಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.





