ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣ ಕೂಡ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ.
ಬೆಂಗಳೂರಿನ ಜನತೆ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದು, ಏರಿಯಾ ಏರಿಯಾಗಳಲ್ಲೂ ಡೆಂಗ್ಯೂ ತಾಂಡವವಾಡುತ್ತಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಹಾಗೂ 27 ವರ್ಷದ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಓಟ ಜೋರಾಗಿದೆ. ಕಳೆದ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್‌ಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ.
ಸಾವಿನ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದ್ದು, ಜನತೆ ಜಾಗ್ರತೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಮನೆಯ ಸುತ್ತಮುತ್ತಾ ಮಳೆ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿ, ಮಳೆ ನೀರು ಸರಾಗವಾಹಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿಕೊಳ್ಳಿ, ರೋಗ ಲಕ್ಷಣಗಳು ಕಂಡು ಬಂದರೆ, ಶೀಘ್ರದಲ್ಲೇ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಿ. ಎಲ್ಲಾ ಕಡೆ ಶುಚಿತ್ವ ಕಾಪಾಡಿ ಎಂದು ಆರೋಗ್ಯ ಇಲಾಖೆ ಜನತೆಗೆ ಮನವಿ ಮಾಡಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…