Mysore
28
haze

Social Media

ಸೋಮವಾರ, 09 ಮಾರ್ಚ್ 2026
Light
Dark

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್‌ ದಾಖಲು

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದೆ.

ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ಆರೋಪಿಸಿದ್ದರು. ಈ ಸಂಬಂಧ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರಿಗೆ ದೂರು ಸಲ್ಲಿಸಿದ್ದರು.

ಇದಕ್ಕೆ ಪುಷ್ಠಿ ನೀಡುವಂತೆ ಶಾಸಕ ಮುನಿರತ್ನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್‌ ಆಗಿದೆ. ಬೇಡಿಕೆ ಹಣವನ್ನು ಚಲುವರಾಜು ನೀಡದ ಕಾರಣ ಶಾಸಕರು ಗುತ್ತಿಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.

ಗುತ್ತಿಗೆ ಮುಂದುವರಿಸಲು ಈ ಹಿಂದೆ ನಿರ್ಧರಿಸಿದ್ದ ಹಣವನ್ನು ಪಾವತಿಸಬೇಕು ಎಂದು ಮುನಿರತ್ನ ಸಹಾಯಕ ಸಂತೋಷ್ ಹೇಳಿದ್ದಾರೆ ಅಂತಾ ಚಲುವರಾಜು ತಿಳಿಸಿದ್ದಾರೆ.

ಈ ಆಡಿಯೋ ಕ್ಲಿಪನ್ನು ನಗರ ಪೊಲೀಸ್‌ ಮುಖ್ಯಸ್ಥರಿಗೆ ಸಲ್ಲಿಸಿದ್ದು, ಘಟನೆಯ ಸಂಪೂರ್ಣ ವಿವರವನ್ನು ಹೇಳಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್‌ ದಾಖಲಾಗಿದೆ.

Tags:
error: Content is protected !!