ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಜೀವ ಬೆದರಿಕೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದೆ.
ನನ್ನ ಮೇಲೆ ದೌರ್ಜನ್ಯ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವವರು ಆರೋಪಿಸಿದ್ದರು. ಈ ಸಂಬಂಧ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ದೂರು ಸಲ್ಲಿಸಿದ್ದರು.
ಇದಕ್ಕೆ ಪುಷ್ಠಿ ನೀಡುವಂತೆ ಶಾಸಕ ಮುನಿರತ್ನ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ. ಬೇಡಿಕೆ ಹಣವನ್ನು ಚಲುವರಾಜು ನೀಡದ ಕಾರಣ ಶಾಸಕರು ಗುತ್ತಿಗೆ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಗುತ್ತಿಗೆ ಮುಂದುವರಿಸಲು ಈ ಹಿಂದೆ ನಿರ್ಧರಿಸಿದ್ದ ಹಣವನ್ನು ಪಾವತಿಸಬೇಕು ಎಂದು ಮುನಿರತ್ನ ಸಹಾಯಕ ಸಂತೋಷ್ ಹೇಳಿದ್ದಾರೆ ಅಂತಾ ಚಲುವರಾಜು ತಿಳಿಸಿದ್ದಾರೆ.
ಈ ಆಡಿಯೋ ಕ್ಲಿಪನ್ನು ನಗರ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ್ದು, ಘಟನೆಯ ಸಂಪೂರ್ಣ ವಿವರವನ್ನು ಹೇಳಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಎರಡು ಎಫ್‌ಐಆರ್ ದಾಖಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…