ಬೀದರ್: ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಆನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದು, ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ಹಾಸನ ಹಾಗೂ ಕೋಲಾರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ದರು.
ಸಾವಿನ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರ ಈಶ್ವರ್ ಖಂಡ್ರೆ ಅವರು ರಾಜ್ಯ ಸರ್ಕಾರ ಮೃತರ ಕುಟುಂಬಗಳೊಂದಿಗೆ ಇದೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ, ವನ್ಯಜೀವಿ-ಮಾನವ ಸಂಘರ್ಷಕ್ಕೆ ತಕ್ಷಣವೇ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಈ ಘಟನೆಗಳು ಬೆಳಿಗ್ಗೆ ಮತ್ತು ಸಂಜೆ ನಡೆಯುತ್ತವೆ. ಹಾಗಾಗಿ ಎಲ್ಲರೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.





