Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

ಒಂದೇ ದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಉತ್ತರ ಕರ್ನಾಟಕವನ್ನೇ ಬೆಚ್ಚಿಬೀಳಿಸಿದ ಪ್ರಕರಣ

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯನಗರಿಯಲ್ಲಿ ಒಂದೇ ದಿನದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣವು ಇಡೀ ಉತ್ತರ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ.

ಶಹರ ಮತ್ತು ಅಶೋಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದಿರುವ ಈ ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಅಪ್ರಾಪ್ತರೆ ಆರೋಪಿಗಳಾಗಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿಯ ಮೇಲೆ 14-15 ವರ್ಷದ ಮೂವರು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಇಲ್ಲದಿರುವ ಸಮಯದಲ್ಲಿ, ಅದೇ ಪ್ರದೇಶದಲ್ಲಿ ವಾಸಿಸುವ ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ದೌರ್ಜನ್ಯಕ್ಕೆ ಒಳಗಾಗಿರುವ ಬಾಲಕಿಗೆ ರಕ್ಷಣೆ ನೀಡಲಾಗಿದೆ ಮತ್ತು ಮೂವರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿ ಇಬ್ಬರು ಪ್ರೌಢಶಾಲಾ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ ಬಾಲಕ ಶಾಲೆ ಬಿಟ್ಟವನಂತೆ ಕಾಣುತ್ತಿದೆ ಎಂದು ಆಯುಕ್ತ ಶಶಿಕುಮಾರ್ ಹೇಳಿದರು.

ಈ ಕೃತ್ಯದ ವಿಡಿಯೋ ತಮ್ಮ ಬಳಿ ಇದೆ ಎಂದು ಬಾಲಕರು ಬಾಲಕಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ಥ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ಮೊಬೈಲ್‍ಗಳನ್ನು ಸಹ ವಶಪಡಿಸಿಕೊಳ್ಳಲಾಗುವುದು ಮತ್ತು ಅಗತ್ಯ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಅದೇ ರೀತಿ ಅಶೋಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆದಿದೆ. ಜೊತೆಗೆ ಆಕೆಯ ತಂದೆ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಶಿಕುಮಾರ್ ಮಾಹಿತಿ ನೀಡಿದರು.

ಮೊದಲನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು, ಎರಡನೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

Tags:
error: Content is protected !!