Mysore
32
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ಮಾರ್ಚ್.‌31ರ ನಂತರ ಬರಲಿದೆ 2 ಕಂತಿನ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ರಾಜ್ಯದ ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ನ್ಯೂಸ್‌ ನೀಡಿದ್ದು, ಮಾರ್ಚ್.‌31ರ ನಂತರ ಎರಡು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಗೃಹಲಕ್ಷ್ಮೀಯರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ನಿಮಗೆ ಅನ್ಯಾಯ ಮಾಡುವುದಿಲ್ಲ. ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಎರಡು ತಿಂಗಳ ಹಣ ಮಾರ್ಚ್.‌31ರ ಬಳಿಕ ಒಟ್ಟಿಗೆ ಜಮೆಯಾಗಲಿದೆ ಎಂದರು.

ಇನ್ನು ಅಂಗನವಾಡಿ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಗೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ಒಂದು ಸಾವಿರ, ಸಹಾಯಕಿಯರ ಗೌರವಧನವನ್ನು 750 ರೂ ಹೆಚ್ಚಿಸಿದ್ದೇವೆ. ಅದನ್ನು ಈಗ ಜಾರಿಗೆ ತರುತ್ತೇವೆ ಎಂದು ಹೇಳಿದರು.

Tags:
error: Content is protected !!