ಬೆಳಗಾವಿ: ರಾಜ್ಯದ ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್ ನೀಡಿದ್ದು, ಮಾರ್ಚ್.31ರ ನಂತರ ಎರಡು ತಿಂಗಳ ಹಣ ಒಟ್ಟಿಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮೀಯರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ನಿಮಗೆ ಅನ್ಯಾಯ ಮಾಡುವುದಿಲ್ಲ. ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ. ಎರಡು ತಿಂಗಳ ಹಣ ಮಾರ್ಚ್.31ರ ಬಳಿಕ ಒಟ್ಟಿಗೆ ಜಮೆಯಾಗಲಿದೆ ಎಂದರು.
ಇನ್ನು ಅಂಗನವಾಡಿ ಕಾರ್ಯಕರ್ತೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಗೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ಒಂದು ಸಾವಿರ, ಸಹಾಯಕಿಯರ ಗೌರವಧನವನ್ನು 750 ರೂ ಹೆಚ್ಚಿಸಿದ್ದೇವೆ. ಅದನ್ನು ಈಗ ಜಾರಿಗೆ ತರುತ್ತೇವೆ ಎಂದು ಹೇಳಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…