ಚಿಕ್ಕಮಗಳೂರು: ಎನ್.ಆರ್.ಪುರ ತಾಲ್ಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್‌ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾದಂತಾಗಿದೆ.
ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬನಿಗೆ ಬೇರೆ ಅನಾರೋಗ್ಯದ ಕಾರಣ ಮಣಿಪಾಲ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಟ್ಟಿಮನೆ ಗ್ರಾಮಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರಿಗೆ ಗ್ರಾಮದ ಶುಚಿತ್ವದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬಿಳ್ಕೊಡಿ ಗ್ರಾಮದ 6 ಜನರಿಗೆ ಮಂಗನ ಕಾಯಿಲೆ ಕಾಣಿಸಿಕೊಂಡಿತ್ತು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…