ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. ೨೦೧೮ ರ ವಿಧಾನಸಭೆ ಚುನಾವಣೆಯ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡೆವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ ೩ ಎಕರೆ ೧೬ ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ ೨೫ ಲಕ್ಷ ರೂ ಎಂದು ನಮೂದಿಸಿದ್ದಾರೆ. ಆದರೆ ೨೦೦೫ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. ೨೦೨೩ ರ ವಿಧಾನಸಭೆ ಚುನಾವಣೆಯ ವೇಳೆ ೧೪ ಮುಡಾ ಸೈಟ್ ಗಖ ಮೌಲ್ಯ ಕೇವಲ ೮ ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ. ಮುಡಾ ೧೪ ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ ೩೪ ಕೋಟಿ . ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆಂದು ಮುಖ್ಯ ಚುನಾವಣಾಧಿಕಾರಿಗೆ ಟಿ.ಜೆ ಅಬ್ರಹಾಂ ಎರಡನೇ ದೂರು ಸಲ್ಲಿಸಿದ್ದಾರೆ.