ರಾಜ್ಯ

ಮುಡಾ ಹಗರಣ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ತಲೆಗೆ ಮತ್ತೊಂದು ದೂರು

ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್‌ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. ೨೦೧೮ ರ ವಿಧಾನಸಭೆ ಚುನಾವಣೆಯ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡೆವಿಟ್‌ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ ೩ ಎಕರೆ ೧೬ ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ ೨೫ ಲಕ್ಷ ರೂ ಎಂದು ನಮೂದಿಸಿದ್ದಾರೆ. ಆದರೆ ೨೦೦೫ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. ೨೦೨೩ ರ ವಿಧಾನಸಭೆ ಚುನಾವಣೆಯ ವೇಳೆ ೧೪ ಮುಡಾ ಸೈಟ್‌ ಗಖ ಮೌಲ್ಯ ಕೇವಲ ೮ ಕೋಟಿ ಎಂದು ಅಫಿಡವಿಟ್‌ ನಲ್ಲಿ ನಮೂದಿಸಿದ್ದಾರೆ. ಮುಡಾ ೧೪ ಸೈಟ್‌ ಗಳ  ಅಸಲಿ ಮಾರುಕಟ್ಟೆ ಮೌಲ್ಯ ೩೪ ಕೋಟಿ . ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆಂದು  ಮುಖ್ಯ ಚುನಾವಣಾಧಿಕಾರಿಗೆ ಟಿ.ಜೆ ಅಬ್ರಹಾಂ ಎರಡನೇ ದೂರು ಸಲ್ಲಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

5 mins ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

12 mins ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

21 mins ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

33 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago