ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಬಿಡದಿ ಹೊರವಲಯದಲ್ಲಿ ಶುಕ್ರವಾರ(ಜೂ.14) ರಾತ್ರಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಾದ ವಿಶ್ವ(21), ಸೂರ್ಯ(21) ಮೃತಪಟ್ಟವರು. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ಬರುವಾಗ ಶುಕ್ರವಾರ ರಾತ್ರಿ 12;30 ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಶವಗಳನ್ನು ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ. ಘಟನೆ ಸಂಬಂಧ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ಫ್ಯಾನ್ಸ್ ವಾರ್ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್…
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…