ರಾಜ್ಯ

ಶರಣಾಗಿದ್ದ ಇಬ್ಬರು ನಕ್ಸಲರು ಪೊಲೀಸ್‌ ವಶಕ್ಕೆ

ಶಿವಮೊಗ್ಗ: ಸಮಾಜದ ಮುಖ್ಯವಾಹಿನಿಗೆ ಬರಲು ತೀರ್ಮಾನಿಸಿ ಇತ್ತೀಚಿಗೆ ಶರಣಾಗಿದ್ದ ಮುಂಡಗಾರು ಲತಾ ಮತ್ತು ವನಜಾಕ್ಷಿ ಎಂಬ ಇಬ್ಬರು ನಕ್ಸಲರನ್ನು 3 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಇಂದು (ಫೆ.10) ಪೊಲೀಸರು ಇಬ್ಬರು ನಕ್ಸಲರನ್ನು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಗೀತಾಮಣಿ ಅವರು ಈ ಆದೇಶ ಹೊರಡಿಸಿದ್ದಾರೆ.

ನಾಗರೀಕ ಸಮಾಜದಲ್ಲಿ ಜೀವಿಸುವ ಉದ್ದೇಶದಿಂದ ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಮುಂದೆ ಸುಮಾರು 6 ನಕ್ಸಲರು ಶರಣಾಗಿದ್ದರು.

ಮುಂಡಗರು ಲತಾ ಮತ್ತು ವನಜಾಕ್ಷಿ ವಿರುದ್ಧ ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣ, ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

13 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

13 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago