ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ನೈಸ್‍ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ತಡೆ 

ಬೆಂಗಳೂರು: ಬೆಂಗಳೂರು ಹೊರವಲಯದ ನೈಸ್​ ರಸ್ತೆಯಲ್ಲಿ ರಾತ್ರಿ ವೇಳೆ ವಾಹನ ಸವಾರರ ಮೇಲೆ ದಾಳಿಗಳು ಮತ್ತು ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 16ರಿಂದ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ದ್ವಿಚಕ್ರ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ.

ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್​ ಆಯುಕ್ತ ಡಾ.ಬಿ ಆರ್​ ರವಿಕಾಂತೇ ಗೌಡ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದಿಚಕ್ರವಾಹನಗಳ ಸಂಚಾರ ಬ್ಯಾನ್​ ಮಾಡಿ ಆದೇಶ ಹೊರಡಿಸಿದ್ದಾರೆ.

× Chat with us