Mysore
25
heavy intensity rain

Social Media

ಶುಕ್ರವಾರ, 29 ಮೇ 2026
Light
Dark

ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತ ; ಯುವಕರಿಬ್ಬರು ಸಾವು

ಬೆಳ್ತಂಗಡಿ: ಇಲ್ಲಿನ ನಾರಾವಿಯ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಸ್ಥಳೀಯ ನಿವಾಸಿ ಪ್ರಶಾಂತ್ ಹಾಗೂ ಬೆಳ್ಮಣ್ ನಿವಾಸಿ ದಿನೇಶ್ ಮೃತಪಟ್ಟವರು.

ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ ಬೈಕ್‌ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಬೈಕ್‌ನಲ್ಲಿದ್ದ ಪ್ರಶಾಂತ್ ಮತ್ತು ದಿನೇಶ್  ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕಾರ್ಯಕ್ರಮಕ್ಕೆಂದು ಹೋದವರು ಹಿಂತಿರುಗುವ ವೇಳೆ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ವೇಣೂರು ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!