ರಾಜ್ಯ

ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿ: ಯು.ಟಿ.ಖಾದರ್

ರೋಮ್‌/ಬೆಂಗಳೂರು: ಯಾವುದೇ ಧರ್ಮ, ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ತಿಳಿಸಿದ್ದಾರೆ.

ರೋಮ್‌ನ ವ್ಯಾಟಿಕನ್‌ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೊದಲ ಅಂತರರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ ಸ್ಮರಣಾರ್ಥ ಇಂದು(ಡಿ.3) ಆಯೋಜಿಸಿದ್ದ “ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು” ಎಂಬ ಶೀರ್ಷಿಕೆಯ ಮೂರು ದಿನಗಳ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ವೈವಿಧ್ಯತೆಗಳನ್ನು ಹೊಂದಿದ್ದರೂ, ಪ್ರತಿಯೊಬ್ಬರೊಳಗಿರುವ ದೈವಿಕ ಚೇತನವು ಒಂದೇ. ಸಮಾಜವನ್ನು ಮುನ್ನಡೆಸುವ ನನ್ನ ಸಹೋದರ ಸಹೋದರಿಯರೇ, ನಾವಿಂದು ದ್ವೇಷವನ್ನು ತಿರಸ್ಕರಿಸುವ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.

ನಾನು ಇಲ್ಲಿ ಯಾವುದೇ ಒಂದು ಧರ್ಮದ ಪ್ರತಿನಿಧಿಯಾಗಿ ಬಂದಿಲ್ಲ‌. ಬದಲಾಗಿ ಮಾನವೀಯತೆಯ ವಿನಮ್ರ ಧ್ವನಿಯಾಗಿ, ಶಾಂತಿ, ಪ್ರೀತಿ ಮತ್ತು ಸೌಹಾರ್ದತೆಯಿಂದ ತುಂಬಿದ ಒಂದು ಸುಂದರ ಪ್ರಪಂಚದ ಕನಸು ಕಾಣುವ ಶತಕೋಟಿ ಜನರ ಸಾಮೂಹಿಕ ಆಶಯ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡು ಅವರೆಲ್ಲರ ಧ್ವನಿಯಾಗಿ ಇಲ್ಲಿ ನಿಮ್ಮೆದುರು ನಿಂತಿದ್ದೇನೆ ಎಂದು ಹೇಳಿದ್ದಾರೆ.

“ಒಂದು ಜಾತಿ, ಒಂದು ಧರ್ಮ ಮತ್ತು ಒಬ್ಬ ದೇವರು”ಎಂಬಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ
ಬೋಧನೆಯು ಕೇರಳದಲ್ಲಿ ಸಾಮಾಜಿಕ ಸಮಾನತೆ, ಸಾಮರಸ್ಯ ಮತ್ತು ಶಾಂತಿಯುತ ಸಹಬಾಳ್ವೆಯನ್ನು ಪ್ರತಿಪಾದಿಸುವ ಮಹತ್ವದ ಸಾಮಾಜಿಕ ಆಂದೋಲನವನ್ನು ಸೃಷ್ಟಿಸಿತ್ತು. ಜೊತೆಗೆ, ಶ್ರೀ ನಾರಾಯಣ ಗುರುಗಳು ಸಮಾಜದ ಸಬಲೀಕರಣ ಮತ್ತು ಉನ್ನತೀಕರಣದಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಜನರಲ್ಲಿ ಗಾಢವಾದ ಅರಿವು ಮೂಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago