ಉಡುಪಿ: ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.
ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ.
ಇಂದು ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಇದ್ದರು.
ಬಳಿಕ ಎಸ್‌ಪಿ ಕೆ.ಅರುಣ್, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ ಅವರ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಿತು.
ನಕ್ಸಲ್ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ವಿಕ್ರಂಗೌಡ ಮೃತಪಟ್ಟಿದ್ದನು. ಇದೀಗ ಲಕ್ಷ್ಮಿ ತೊಂಬಟ್ಟು ಪೊಲೀಸರಿಗೆ ಶರಣಾಗಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…