ಉಡುಪಿ: ನಾಡದೋಣಿ ಮಗುಚಿ ಮೂವರು ಮೀನುಗಾರರು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಗಂಗೊಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಸುರೇಶ್ ಖಾರ್ವಿ, ರೋಹಿತ್ ಖಾರ್ವಿ, ಜಗ್ಗು ಎಂದು ಗುರುತಿಸಲಾಗಿದೆ.
ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಒಬ್ಬರನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.





