ಉಡುಪಿ: ಪತ್ನಿ ಜ್ಯೋತಿ ಜೋಶಿ ಜೊತೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮಿಜಿಯನ್ನು ಭೇಟಿ ಮಾಡಿ, ಮಠದಲ್ಲೇ ಅನ್ನಪ್ರಸಾದ ಸ್ವೀಕರಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್ ಜೋಶಿಗೆ ಗೌರವ ಸಮರ್ಪಿಸಲಾಯಿತು.
ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರೋಪಿಗೆ ಪ್ರೋಟೋಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೇ ಬಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಚಕಾರ ಎತ್ತುತ್ತಿಲ್ಲ. ಇದನ್ನೆಲ್ಲಾ ನೋಡಿದರೆ ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನುವ ಅನುಮಾನಗಳು ಮೂಡುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ರೂಪಾಯಿ ಚಿಹ್ನೆ ನಿರಾಕರಿಸಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ರಾಷ್ಟ್ರೀಯ ಹಿತಾಶಕ್ತಿಯ ವಿಚಾರ. ಈ ರೀತಿ ಮಾಡಿರುವುದು ಸರಿಯಲ್ಲ. ರೂಪಾಯಿ ಸಿಂಬಲ್ ಮೋದಿ ಅಥವಾ ಬಿಜೆಪಿ ಮಾಡಿದ್ದಾ? ಈ ಚಿಹೆಯನ್ನು ಮಾಡಿದ್ದು ಕಾಂಗ್ರೆಸ್ ಸರ್ಕಾರ. ಆದರೂ, ಯಾಕೆ ಈ ತೀರ್ಮಾನ ತೆಗೆದುಕೊಂಡ್ರಿ. ನೀವು ಮಾಡಿದ್ದ ಸಿಂಬಲ್‌ಗೆ ನಮ್ಮದೇನೂ ಅಭ್ಯಂತರವಿರಲಿಲ್ಲ. ಜೊತೆಗೆ ಈ ಡಿಸೈನ್ ಮಾಡಿದ್ದು ತಮಿಳುನಾಡಿನವನು. ನಿಮ್ಮ ಕ್ಷುಲ್ಲಕ ರಾಜಕಾರಣಕ್ಕೆ ಈ ರೀತಿ ಹೇಳಿಕೆ ನೀಡಬೇಡಿ ಎಂದು ಕಿಡಿಕಾರಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…