Mysore
25
scattered clouds

Social Media

ಬುಧವಾರ, 15 ಜನವರಿ 2025
Light
Dark

ಉಡುಪಿ|ಕಡಲ್ಕೊರೆತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ(ಜು.21) ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಲಕ್ಷ್ಮೀ ಹೆಬ್ಬಾಳಕರ್‌ ಅವರು, ಉಡುಪಿಯ ಪಡುತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮ ಭೇಟಿ ನೀಡಿದ ನೀಡಿ, ಮಳೆಯಿಂದ ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ದುರ್ಗಿ ಪೂಜಾರ್ತಿ ಅವರಿಗೆ ಸಾಂತ್ವನ ಹೇಳಿದರು. ಶೀಘ್ರವೇ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ ಸಚಿವರು,ಪರಿಹಾರ ಮೊತ್ತದ ನಡಾವಳಿ ಪತ್ರ ವಿತರಿಸಿದರು.

ಗುಡ್ಡ ಕುಸಿತ ಭೀತಿಯಲ್ಲಿರುವ ಬೈಂದೂರಿನ ಒತ್ತಿಣೆನೆ ಪ್ರದೇಶಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಉಡುಪಿ ಜಿಲ್ಲೆಯಲ್ಲಿ ಹಾದು‌ ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಂಡು ಬರುವ ಗುಂಡಿಗಳನ್ನು ಮುಚ್ಚಿಸಬೇಕು. ವಾಹನ ಸವಾರರಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಗುತ್ತಿಗೆದಾರ ಕಂಪನಿ ಐಆರ್ ಬಿಗೆ ಸೂಚನೆ ನೀಡಿದರು.

ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ, ಡಿಎಫ್ಒ ಗಣಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.

Tags: