ಉಡುಪಿ: ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ(ಜು.21) ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ಪಡುತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮ ಭೇಟಿ ನೀಡಿದ ನೀಡಿ, ಮಳೆಯಿಂದ ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ದುರ್ಗಿ ಪೂಜಾರ್ತಿ ಅವರಿಗೆ ಸಾಂತ್ವನ ಹೇಳಿದರು. ಶೀಘ್ರವೇ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ ಸಚಿವರು,ಪರಿಹಾರ ಮೊತ್ತದ ನಡಾವಳಿ ಪತ್ರ ವಿತರಿಸಿದರು.
ಗುಡ್ಡ ಕುಸಿತ ಭೀತಿಯಲ್ಲಿರುವ ಬೈಂದೂರಿನ ಒತ್ತಿಣೆನೆ ಪ್ರದೇಶಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಉಡುಪಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಂಡು ಬರುವ ಗುಂಡಿಗಳನ್ನು ಮುಚ್ಚಿಸಬೇಕು. ವಾಹನ ಸವಾರರಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಗುತ್ತಿಗೆದಾರ ಕಂಪನಿ ಐಆರ್ ಬಿಗೆ ಸೂಚನೆ ನೀಡಿದರು.
ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್. ಆರ್. ರಶ್ಮಿ, ಡಿಎಫ್ಒ ಗಣಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…