ರಾಜ್ಯ

ನಗರಾಭಿವೃದ್ಧಿ ಇಲಾಖೆಯಿಂದ ಯುಜಿಡಿ ನಿರ್ವಹಣೆ ಅಸಾಧ್ಯ : ಸಚಿವ ಬೈರತಿ ಸುರೇಶ್

ವಿಧಾನಸಭೆ : ನಗರಾಭಿವೃದ್ಧಿ ಇಲಾಖೆಯಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಒಳಚರಂಡಿ ಮತ್ತು ಅದಕ್ಕೆ ಸಂಬಂಧಿಸಿದ ಸೇವೆಗಳ ನಿರ್ವಹಣೆ ಅಸಾಧ್ಯ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಸ್ಪಷ್ಟನೆ ನೀಡಿದರು.

ಇದನ್ನು ಓದಿ: ಡಿನ್ನರ್‌ ಮೀಟಿಂಗ್‌ ಶಕ್ತಿ ಪ್ರದರ್ಶನವಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್‌

ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು ನಗರಾಭಿವೃದ್ಧಿ ಇಲಾಖೆಯ ಹೊಣೆಗಾರಿಕೆ. ನಂತರದಲ್ಲಿ ಅದರ ನಿರ್ವಹಣೆ ಮಾಡುವುದು ಸ್ಥಳೀಯ ನಗರ ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ, ಈ ಜವಾಬ್ದಾರಿಯನ್ನು ನಿಭಾಯಿಸಬೇಕಾದರೆ ವಾರ್ಷಿಕ 700 ರಿಂದ 800 ಕೋಟಿ ರೂಪಾಯಿ ಬೇಕಾಗುತ್ತದೆ. ಇದರಿಂದ ಸರ್ಕಾರಕ್ಕೆ ಹೊರೆಯಾಗಲಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳೇ ತಮ್ಮ ಸಂಪನ್ಮೂಲವನ್ನು ಕ್ರೋಢೀಕರಿಸಿ ನಿರ್ವಹಣೆ ಮಾಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಸದಸ್ಯ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಂದಾಪುರ ಪಟ್ಟಣದಲ್ಲಿ ಒಟ್ಟು 4183.32 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಶೇ.60 ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

14 mins ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

33 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago