ರಾಜ್ಯ

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ
• ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ

ವಿಧಾನಸಭೆ : ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಏಕೀಕೃತ ಭೂ ನಿರ್ವಹಣಾ ವ್ಯವಸ್ಥೆ(ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ ಮೆಂಟ್ ಸಿಸ್ಟಂ-ULMS) ಜಾರಿಗೆ ಬರಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಜ್ಯೋತಿ ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಭೂದಾಖಲೆಗಳು, ಸಮೀಕ್ಷೆ, ಭೂಪರಿವರ್ತನೆ, ಆಸ್ತಿ ತೆರಿಗೆ ಮತ್ತು ಇ-ಖಾತಾ ಸೇವೆಗಳನ್ನು ಒಂದೇ ಕಡೆ ಲಭ್ಯವಾಗುವಂತೆ ಮಾಡುವ ಪ್ಲಾಟ್ ಫಾರ್ಮ್ ಇದಾಗಿದೆ. ಪೈಲಟ್ ಯೋಜನೆಯಡಿ ಸದ್ಯದಲ್ಲಿಯೇ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಅನಧಿಕೃತ ಕಟ್ಟಡಗಳಿಗೆ, ಆಸ್ತಿಗಳಿಗೆ ಇ-ಖಾತಾ ಮಾಡಿಕೊಡಲೆಂದು ಇ-ಆಸ್ತಿ ತಂತ್ರಾಂಶವನ್ನು ಪರಿಚಯಿಸಲಾಗಿದೆ. ಕಟ್ಟಡ ಮತ್ತು ನಿವೇಶನಗಳು ಎಷ್ಟೇ ವಿಸ್ತೀರ್ಣದ್ದಾಗಿದ್ದರೂ ಇ-ಖಾತಾ ಮಾಡಿಕೊಡಲಾಗುತ್ತದೆ. ಅಲ್ಲದೇ, ನಾಗರಿಕರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಇ-ಖಾತೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇ-ತಂತ್ರಾಂಶದಲ್ಲಿ ಯಾವುದೇ ದೋಷಗಳು ಕಂಡು ಬಂದಿಲ್ಲ. ಹಾಗೊಂದು ವೇಳೆ ಸಮಸ್ಯೆ ಎದುರಾದರೆ ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಇ-ತಂತ್ರಾಂಶದಲ್ಲಿ ನಾಗರಿಕರು ತಮ್ಮ ಆಸ್ತಿಯ ಸಂಪೂರ್ಣ ಮಾಹಿತಿಯನ್ನು ನಮೂದು ಮಾಡಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ : ನಾಗಲಕ್ಷ್ಮೀ ಚೌಧರಿ

ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…

20 mins ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

59 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

1 hour ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

3 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago