ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಎಚ್ ಡಿಕೆ ನಿವಾಸಕ್ಕೆ ವಿದ್ಯುತ್ ದೀಪಲಂಕಾರ ಮಾಡಲು ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾಲಂಕಾರ ಮಾಡಲು ಅಧಿಕೃತವಾಗಿ ಬೀದಿ ಬದಿಯ ಕಂಬಗಳಿಂದ ನೇರವಾಗಿ ವಿದ್ಯುತ್ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಇನ್ನು ಈ ಕುರಿತು ಕಾಂಗ್ರೆಸ್ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದು, ಜಗತ್ತಿನ ಏಕೈಕ ಮಹಾ ಪ್ರಾಮಾಣಿಕ ಎಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದ ದೀಪಾವಳಿ ಅಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವಷ್ಟು ದಾರಿದ್ರ್ಯ ಬಂದಿರುವುದು ದುರಂತ.
ಎಚ್. ಡಿ ಕುಮಾರಸ್ವಾಮಿ ಅವರೇ ಗೃಹಜೋತಿ2 00 ಯೂನಿಟ್ ಉಚಿತ ಕೊಡುತ್ತಿದೆ ಹೊರತು 2000 ಯೂನಿಟ್ ಅಲ್ಲ! ನಿಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹ ಜ್ಯೋತಿಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದು ವ್ಯಂಗ್ಯವಾಡಿದೆ.
ಇನ್ನು ಇದಕ್ಕೆ ಪ್ರತಿಕ್ರಿಯಿಸಿರುವ ಎಚ್. ಡಿಕೆ ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದ ಮನೆಯಲ್ಲಿದ್ದೆ. ನೆನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ತಿಳಿಯಿತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವದ ಸ್ಥಿತಿ ಇದರಲ್ಲಿ ಮುಚ್ಚು ಮರೆ ಮಾಡುವಂತದ್ದು ಏನು ಇಲ್ಲ.
ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಅಧಿಕಾರಿಗಳು ಬಂದು ನೋಟಿಸ್ ನೀಡಲಿ ದಂಡ ಕಟ್ಟುತ್ತೇನೆ. ಕಾಂಗ್ರೆಸ್ ಇದನ್ನೇ ದೊಡ್ಡದು ಮಾಡಿ ಪ್ರಚಾರಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲಕ ಮನಸ್ಥಿತಿಯ ಬಗ್ಗೆ ನನಗೆ ಮರುಕವಿದೆ ಎಂದಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…