ರಾಜ್ಯ

ಸರ್ಕಾರದ ಪರಿಸ್ಥಿತಿಯನ್ನೂ ಅರ್ಥ ಮಾಡಿಕೊಳ್ಳಿ: ಸಾರಿಗೆ ನೌಕರರಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಪರಿಸ್ಥಿತಿಯನ್ನೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಸಾರಿಗೆ ನೌಕರರು ಹಠ ಮಾಡೋದು ಸರಿಯಲ್ಲ. ನೌಕರರು ಸಹಕಾರ ಕೊಡಬೇಕು. ಸಾರಿಗೆ ನೌಕರರ ಜೊತೆ ಸಿಎಂ ಹಾಗೂ ಸಚಿವರು ಸಭೆ ಮಾಡಿದ್ದಾರೆ. ಸರ್ಕಾರದ ಪರಿಸ್ಥಿತಿಯನ್ನು ಸಾರಿಗೆ ನೌಕರರು ಗಮನದಲ್ಲಿಟ್ಟುಕೊಳ್ಳಬೇಕು. ನಾಗರಿಕರ ವಿಚಾರವನ್ನೂ ಗಮದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ. ಎಲ್ಲದಕ್ಕಿಂತಲೂ ಸಾರ್ವಜನಿಕರ ಹಿತ ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಿ. ಹಠ ಮಾಡೋದು ಬೇಡ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 mins ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

12 mins ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

10 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

10 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

11 hours ago