ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ ತಮ್ಮ ಹಕ್ಕು ಸಾಧನೆಗಾಗಿ ನಿರುದ್ಯೋಗಿಗಳು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತಾಡುತ್ತಾ, ಈ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಪೊಲೀಸ್ ಕೇಸುಗಳಿಗೆಲ್ಲ ಹೆದರಬೇಡಿ. ಆ ಕೇಸುಗಳನ್ನು ಕಿತ್ತೆಸೆಯುವುದು ನಮ್ಮ ಜವಾಬ್ದಾರಿ ಎಂದು ಕುಮಾರಸ್ವಾಮಿ ಅವರು ನಿರುದ್ಯೋಗಿ ಯುವಕರಿಗೆ ಧೈರ್ಯ ತುಂಬಿದರು.
ಈ ಕೆಟ್ಟ ಸರ್ಕಾರದ ವಿರುದ್ಧ ಇಡೀ ರಾಜ್ಯದ ಎಲ್ಲೆಡೆ ಹೋರಾಟ ಮಾಡಬೇಕು. ಧಾರವಾಡ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಹೋರಾಟ ನಡೆಸಬೇಕು. ಇದನ್ನು ನಾನು ರಾಜಕೀಯಕ್ಕಾಗಿ ಕೇವಲ ರಾಜಕೀಯಕ್ಕಾಗಿ ಹೇಳುತ್ತಿಲ್ಲ. ಪ್ರತಿಭಾವಂತ ನಿರುದ್ಯೋಗಿ ಯುವಜನರ ಭವಣೆಯನ್ನು ಕಂಡು ರೋಸಿ ಹೋಗಿ ಹೇಳುತ್ತಿದ್ದೇನೆ ಎಂದು ಕೇಂದ್ರ ಸಚಿವರು ಬೇಸರದಿಂದ ಹೇಳಿದರು.
ಕೆಪಿಎಸ್ಸಿಯಲ್ಲಿ ಏನೇನು ನಡೆಯುತ್ತಿದೆ ನಾನು ಗಮನಿಸುತ್ತಿದ್ದೇನೆ. ಅದನ್ನು ಕ್ಲೀನ್ ಮಾಡುತ್ತೇನೆ ಎಂದು ನಿರಂತರವಾಗಿ ಹೇಳುತ್ತಿರುವ ಮುಖ್ಯಮಂತ್ರಿಗಳು ಇನ್ನೂ ಕ್ಲೀನ್ ಮಾಡುವುದರಲ್ಲಿ ಇದ್ದಾರೆ ಪಾಪ. ಆದರೆ ಕೆಪಿಎಸ್‌ಸಿ ಮಾತ್ರ ಕೊಳೆತು ನಾರುತ್ತಿದೆ. ನಿರುದ್ಯೋಗಿ ಯುವಕರು ಬೀದಿಗ ಬಂದು ಹೋರಾಟ ಮಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಪಿಎಸ್‌ಸಿಯಲ್ಲಿ ತಪ್ಪು ಮಾಡಿದವರನ್ನು ಹಾಗೆಯೇ ಬಿಟ್ಟಿದ್ದಾರೆ. ತಪ್ಪೇ ಮಾಡಿರುವ ವ್ಯಕ್ತಿಗಳ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿರುವ ವಿದ್ಯಾರ್ಥಿಗಳು ಇಂತಹ ಕೆಟ್ಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು. ಇಲ್ಲವಾದರೆ ಅವರಿಗೆ ನ್ಯಾಯ ಸಿಗಲ್ಲ. 60ರಿಂದ 70 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಯುವ ಜನರಲ್ಲಿ ನಂಬಿಕೆ ಹುಟ್ಟಿಸಿದ್ದರು. ಇದೇ ಸಿದ್ದರಾಮಯ್ಯ ಅವರು 2011ರಲ್ಲಿ ಕೆಪಿಎಸ್ಸಿ ಮಾಡಿದ್ದ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿದ್ದರು. ಹಿಂಸೆ ಕೊಡುವುದಕ್ಕೂ ಇತಿಮಿತಿ ಇಲ್ಲವೇ? ಒಬ್ಬ ವ್ಯಕ್ತಿಯನ್ನಷ್ಟೇ ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದ್ದಾರೆ. ಯುವಕರು ಸಿದ್ದರಾಗಬೇಕು ಕುಮಾರಸ್ವಾಮಿ ಅವರು ಕರೆ ನೀಡಿದರು.
ವಾರಕ್ಕೆ ಎರಡು ದಿನ ಕರ್ನಾಟಕದಲ್ಲಿ ಇರುತ್ತೇನೆ
ಈ ಸರ್ಕಾರ ಹೋರಾಟ ಮಾಡು ಉದ್ದೇಶದಿಂದ ನಾನು ಕೂಡ ಸುಮ್ಮನೆ ಇರುವ ಹಾಗಿಲ್ಲ. ಜನರ ಪರವಾಗಿ ನಾನು ಸಹ ದನಿ ಎತ್ತಬೇಕಾಗಿದೆ. ಇನ್ನು ಮುಂದೆ ವಾರದಲ್ಲಿ ಎರಡು ದಿನ ಕರ್ನಾಟಕದಲ್ಲೇ ಇರುತ್ತೇನೆ. ಪಕ್ಷವನ್ನು ಸಂಘಟನೆ ಮಾಡುತ್ತೇನೆ ಹಾಗೂ ಜನರ ಪರವಾಗಿಯೂ ಹೋರಾಟ ನಡೆಸುತ್ತೇನೆ ಎಂದು ಕೇಂದ್ರ ಸಚಿವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ನಾನು ಮುಕ್ತ ಮನಸ್ಸಿನಿಂದ ಹೇಳುತ್ತಿದ್ದೇನೆ. ಈ ಸರ್ಕಾರದಿಂದ ರಾಜ್ಯಕ್ಕೆ ಒಳ್ಳೆಯದು ಆಗುವುದಿಲ್ಲ. ನಾವು ಅಧಿಕಾರದಲ್ಲಿದ್ದಾಗ ಮಾತ್ರ ಈ ರಾಜ್ಯಕ್ಕೆ ಒಳ್ಳೆಯದಾಗಿದೆ. ಹೀಗಾಗಿ ಮುಂದೆ ನಾವು ಜನರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕಾಗಿದೆ ಎಂದು ಸಚಿವರು ಹೇಳಿದರು.
ಮಹಿಳಾ ಮೀಸಲಾತಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಬಂದರೆ ರಾಜಕೀಯ ಚಿತ್ರಣವೆ ಬದಲಾಗುತ್ತದೆ. ಮೋದಿಯವರ ನಾಯಕತ್ವದಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕೊಡಲಾಗುತ್ತಿದೆ. ಅಲ್ಲದೆ ಕ್ಷೇತ್ರಗಳ ಮರು ವಿಂಗಡಣೆ ನಂತರ ರಾಜ್ಯದಲ್ಲಿ 42 ಲೋಕಸಭಾ ಕ್ಷೇತ್ರಗಳು ಅಸ್ತಿತ್ವಕ್ಕೆ ಬರಲಿವೆ. ಈ 42 ಲೋಕಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ದೊರೆಯಲಿದ್ದು, ನಮ್ಮ ಪಕ್ಷದಲ್ಲಿ ಮಹಿಳಾ ಕಾರ್ಯಕರ್ತರಿಗೆ ಹೆಚ್ಚಿನ ಉತ್ತೇಜನ ಕೊಡಲಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…