ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದೆ.
ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ಯುಸಿಸಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿರುವ ನ್ಯಾಯಪೀಠ ಸಂವಿಧಾನ ಕರಡು ರಚನಾ ಸಮಿತಿ ಸಭೆಯ ಚರ್ಚೆಯನ್ನು ಉಲ್ಲೇಖಿಸಿದೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಬಾಯ್ ಪಟೇಲ್, ಬಾಬು ರಾಜೇಂದ್ರ ಪ್ರಸಾದ್ ಅಂತಹವರೆಲ್ಲಾ ಯುಸಿಸಿ ಬೆಂಬಲಿಸಿದ್ದರು ಎಂದು ಹೇಳಿದೆ.
ಸಂವಿಧಾನದ ಮೂಲಭೂತ ಅಂಶಗಳಾದ ಪ್ರಜಾಪ್ರಭುತ್ವ, ಏಕತೆ, ಸರ್ವರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಕಾರ್ಯಗತಗೊಳಿಸಲು ಸಂವಿಧಾನದ ಕಲಂ 44ನೇ ವಿಧಿಯ ಆಶಯದಂತೆ ಯುಸಿಸಿ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…