ರಾಜ್ಯ

“ಏಕರೂಪ ನಾಗರಿಕ ಸಂಹಿತೆ” ಜಾರಿಯ ಅಗತ್ಯವಿದೆ: ಹೈಕೋರ್ಟ್‌

ಬೆಂಗಳೂರು: ಸಂವಿಧಾನದ ಮೂಲಭೂತ ಆಶಯಗಳನ್ನು ಸಾಕಾರಗೊಳಿಸಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯ ಅವಶ್ಯಕತೆ ಇದೆ ಎಂದು ಹೈಕೋರ್ಟ್‌ ಅಭಿಪ್ರಾಯ ಪಟ್ಟಿದೆ.

ಮುಸ್ಲಿಂ ಕುಟುಂಬವೊಂದರ ಆಸ್ತಿ ಪಾಲಿಗೆ ಸಂಬಂಧಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಹಂಚಾಟೆ ಸಂಜೀವ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಈ ಅಂಶವನ್ನು ಪ್ರಸ್ತಾಪಿಸಿದೆ.

ಮುಸ್ಲಿಂ ಮಹಿಳೆಯರಿಗೆ ಆಸ್ತಿಯಲ್ಲಿ ಪುರುಷರಷ್ಟೇ ಸಮಾನ ಪಾಲು ಇಲ್ಲ. ಹೀಗಾಗಿ ಯುಸಿಸಿ ಜಾರಿಗೊಳಿಸುವ ಅಗತ್ಯವಿದೆ ಎಂದು ಹೇಳಿರುವ ನ್ಯಾಯಪೀಠ ಸಂವಿಧಾನ ಕರಡು ರಚನಾ ಸಮಿತಿ ಸಭೆಯ ಚರ್ಚೆಯನ್ನು ಉಲ್ಲೇಖಿಸಿದೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್, ಸರ್ದಾರ್‌ ವಲ್ಲಭಬಾಯ್‌ ಪಟೇಲ್‌, ಬಾಬು ರಾಜೇಂದ್ರ ಪ್ರಸಾದ್‌ ಅಂತಹವರೆಲ್ಲಾ ಯುಸಿಸಿ ಬೆಂಬಲಿಸಿದ್ದರು ಎಂದು ಹೇಳಿದೆ.

ಸಂವಿಧಾನದ ಮೂಲಭೂತ ಅಂಶಗಳಾದ ಪ್ರಜಾಪ್ರಭುತ್ವ, ಏಕತೆ, ಸರ್ವರಿಗೂ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಕಾರ್ಯಗತಗೊಳಿಸಲು ಸಂವಿಧಾನದ ಕಲಂ 44ನೇ ವಿಧಿಯ ಆಶಯದಂತೆ ಯುಸಿಸಿ ಜಾರಿಗೊಳಿಸಬೇಕಾದ ಅಗತ್ಯವಿದೆ ಎಂದು ನ್ಯಾಯಪೀಠ ಹೇಳಿದೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

3 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

4 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

7 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

8 hours ago