ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ಮಂಡನೆ ಮಾಡಿರುವುದು ಕೇಂದ್ರ ಬಜೆಟ್ ಅಲ್ಲ. ಬಿಹಾರದ ಬಜೆಟ್, ಈ ಬಿಹಾರಿ ಬಜೆಟ್ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವೇನೂ ಮೊಸರಲ್ಲಿ ಕಲ್ಲು ಹುಡುಕುತ್ತಿಲ್ಲ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರೇ ರಾಜ್ಯಕ್ಕೆ ಸಮರ್ಪಕ ತೆರಿಗೆ ಪರಿಹಾರ ನೀಡಿಲ್ಲ. ಅಲ್ಲದೇ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ತೆರಿಗೆ ಪರಿಹಾರ ಕೇಳಬೇಕು ಎಂದಿದ್ದರು. ಹೀಗಾಗಿ ತೆರಿಗೆ ಅಂಕಿ ಅಂಶವನ್ನಿಟ್ಟುಕೊಂಡು ನಾವು ಕೇಂದ್ರದಿಂದ ತೆರಿಗೆ ಪರಿಹಾರ, ಅನುದಾನ ಕೇಳುತ್ತಿದ್ದೇವೆ ಎಂದು ಹೇಳಿದರು.
ಉದ್ಯೋಗ ಸೃಷ್ಟಿಸುವ ರಾಜ್ಯಗಳಿಗೆ ಅಧಿಕ ಅನುದಾನ ನೀಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಆದರೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಲ್ಲದೇ ಕಳೆದ ಬಜೆಟ್‌ನಲ್ಲಿಯೂ ಆಂಧ್ರಪ್ರದೇಶದ ಅಮರಾವತಿಗೆ ಹೆಚ್ಚು ಒತ್ತು ನೀಡಿದ್ದರು. ಹಾಗಾಗಿ ಇದು ರಾಜಕೀಯ ಬಜೆಟ್ ಅಗಿದೆಯೇ ಹೊರತು, ದೇಶ ಕಟ್ಟುವ ಮತ್ತು ಉದ್ಯೋಗ ಸೃಷ್ಠಿಸುವ ಬಜೆಟ್ ಅಲ್ಲ ಎಂದು ಆರೋಪಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರೇ ಮುಂದಿನ ದಿನಗಳಲ್ಲಿಯೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಾರೆಂಬುದು ನಮ್ಮ ಭಾವನೆಯೆಂದು ಗೃಹ ಸಚಿವ ಜಿ.ಪರಮೇಶ್ವರ್ ಅವರ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಇದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಹೀಗಾಗಿ ಹೈಕಮಾಂಡ್‌ನ ತೀರ್ಮಾನವೇ ಅಂತಿಮವಾಗಿರಲಿದೆ. ಈ ಬಗ್ಗೆ ಮೊದಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅದನ್ನೇ ಹೇಳಿದ್ದರು ಎಂದು ತಿಳಿಸಿದರು.