ರಾಜ್ಯ

ಕೇಂದ್ರ ಬಜೆಟ್ 2025| ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್‌ ಮಂಡನೆ ಮಾಡಿರುವುದು ಕೇಂದ್ರ ಬಜೆಟ್‌ ಅಲ್ಲ. ಬಿಹಾರದ ಬಜೆಟ್‌, ಈ ಬಿಹಾರಿ ಬಜೆಟ್‌ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಕೇಂದ್ರ ಬಜೆಟ್‌ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವೇನೂ ಮೊಸರಲ್ಲಿ ಕಲ್ಲು ಹುಡುಕುತ್ತಿಲ್ಲ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರೇ ರಾಜ್ಯಕ್ಕೆ ಸಮರ್ಪಕ ತೆರಿಗೆ ಪರಿಹಾರ ನೀಡಿಲ್ಲ. ಅಲ್ಲದೇ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ತೆರಿಗೆ ಪರಿಹಾರ ಕೇಳಬೇಕು ಎಂದಿದ್ದರು. ಹೀಗಾಗಿ ತೆರಿಗೆ ಅಂಕಿ ಅಂಶವನ್ನಿಟ್ಟುಕೊಂಡು ನಾವು ಕೇಂದ್ರದಿಂದ ತೆರಿಗೆ ಪರಿಹಾರ, ಅನುದಾನ ಕೇಳುತ್ತಿದ್ದೇವೆ ಎಂದು ಹೇಳಿದರು.

ಉದ್ಯೋಗ ಸೃಷ್ಟಿಸುವ ರಾಜ್ಯಗಳಿಗೆ ಅಧಿಕ ಅನುದಾನ ನೀಡಿದರೆ ದೇಶಕ್ಕೆ ಒಳ್ಳೆಯದಾಗುತ್ತದೆ. ಆದರೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಲ್ಲದೇ ಕಳೆದ ಬಜೆಟ್‌ನಲ್ಲಿಯೂ ಆಂಧ್ರಪ್ರದೇಶದ ಅಮರಾವತಿಗೆ ಹೆಚ್ಚು ಒತ್ತು ನೀಡಿದ್ದರು. ಹಾಗಾಗಿ ಇದು ರಾಜಕೀಯ ಬಜೆಟ್‌ ಅಗಿದೆಯೇ ಹೊರತು, ದೇಶ ಕಟ್ಟುವ ಮತ್ತು ಉದ್ಯೋಗ ಸೃಷ್ಠಿಸುವ ಬಜೆಟ್‌ ಅಲ್ಲ ಎಂದು ಆರೋಪಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರೇ ಮುಂದಿನ ದಿನಗಳಲ್ಲಿಯೂ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಾರೆಂಬುದು ನಮ್ಮ ಭಾವನೆಯೆಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ಇದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ. ಹೀಗಾಗಿ ಹೈಕಮಾಂಡ್‌ನ ತೀರ್ಮಾನವೇ ಅಂತಿಮವಾಗಿರಲಿದೆ. ಈ ಬಗ್ಗೆ ಮೊದಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಅದನ್ನೇ ಹೇಳಿದ್ದರು ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

28 mins ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

3 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

4 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago