ವಿಜಯನಗರ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿ ವಿರೂಪಾಕ್ಷೇಶ್ವರನ ದರ್ಶನ ಪಡೆದರು.
ದಕ್ಷಿಣ ಕಾಶಿ ಎಂದೂ ಕರೆಯಿಸಿಕೊಳ್ಳುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಹಂಪಿಯ ಆನೆ ಲಕ್ಷ್ಮೀಯಿಂದ ಆಶೀರ್ವಾದ ಪಡೆದುಕೊಂಡರು.
ಇದನ್ನು ಓದಿ : ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ವಿರೂಪಾಕ್ಷನ ದರ್ಶನ ಪಡೆದ ಬಳಿಕ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನನಗೆ ಬಹಳಷ್ಟು ಜನ ಹಂಪಿಯನ್ನು ನೋಡಿ ಎನ್ನುತ್ತಿದ್ದರು. ಇಂದು ನನಗೆ ಆ ಅವಕಾಶ ಸಿಕ್ಕಿದೆ. ಇದು ನನ್ನ ಅದೃಷ್ಟ. ಹಂಪಿಯ ಸಾಂಸ್ಕೃತಿಕ ಪರಂಪರೆ ಕಣ್ತುಂಬಿಕೊಂಡಿದ್ದಕ್ಕೆ ಸಂತಸವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಯುನೆಸ್ಕೋ ಗುರುತಿಸುವ ಐತಿಹಾಸಿಕ ತಾಣ ಹಂಪಿ. ಇಲ್ಲಿನ ಪ್ರತಿಯೊಂದು ಶಿಲೆಯೂ ಪರಂಪರೆ ಪ್ರತಿಬಿಂಬಿಸುತ್ತಿದೆ. ಇಲ್ಲಿ ಉತ್ಖನನ ಕಾರ್ಯ ನಡೆಯುತ್ತಿವೆ. ಹಂಪಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.





