ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಂದ್ರ ಸರಕಾರದ ಮಾನ್ಯ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವರಾದ ಶ್ರೀ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಎಚ್.ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.
https://x.com/hd_kumaraswamy/status/1743954875980153253?s=20