Mysore
26
broken clouds

Social Media

ಬುಧವಾರ, 30 ಏಪ್ರಿಲ 2025
Light
Dark

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಅವರು, ಅತೀ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ.. ಎಂದು ಕುಟುಕಿದ್ದಾರೆ.

ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

Tags: