ಬೆಂಗಳೂರು: ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.
ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ.. ಸತ್ಯವನ್ನೇ ಹೇಳಿ ಎಂದು ಟಾಂಗ್ ಕೊಟ್ಟಿರುವ ಅವರು, ಅತೀ ಹಿಂದುಳಿದ 2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು? ಕಿರುಬೆರಳ ತುದಿಯಲ್ಲೇ ದತ್ತಾಂಶವಿದೆ. ನೀವು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಲ್ಲವೇ? ಸತ್ಯಮೇವ ಜಯತೇ.. ಎಂದು ಕುಟುಕಿದ್ದಾರೆ.
ನಿಮಗೂ ಗೊತ್ತು. 2A ಪ್ರವರ್ಗದಲ್ಲಿ 101 ಜಾತಿಗಳಿವೆ, 15% ಮೀಸಲು ಪಾಲು ಇದೆ. ಈ ಪಾಲಿನಲ್ಲಿ ಅತಿಹೆಚ್ಚು ಪಾಲು ನುಂಗಿದವರು ಯಾರು ದೇವ್ರು..? ಈ ನುಂಗುವಿಕೆಯಲ್ಲಿಯೂ ನಿಮ್ಮ ಪಾತ್ರವೇನು ಸ್ವಾಮೀ..? ಸತ್ಯ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…