ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಸ್ಲಿಮರಿಗೆ ಕಾಂಗ್ರೆಸ್‌ ಸರ್ಕಾರ 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್‌ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ನಮ್ಮ ಜೆಡಿಎಸ್‌ ಪಕ್ಷದ ಅಚಲ ನಿಲುವು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

2 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

4 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

5 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

6 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

6 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

6 hours ago