ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.
ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ವಾಮಮಾರ್ಗದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟ ಸಚಿವರು; ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು. ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಪ್ರಹಾರ ನಡೆಸಿದರು.
ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್. ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು. ನಮ್ಮ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದರು ಸಚಿವರು.
ಬಳಿಕ ಸಚಿವರು ನಗರಸಭೆ ಸದಸ್ಯರಾದ ಮಹದೇವು, ರಾಮಲಿಂಗಯ್ಯ, ವಿಶಾಲಾಕ್ಷಿ ಅವರ ಮನೆಗಳಿಗೆ ಭೇಟಿ ನೀಡಿದರು.
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…