ರಾಜ್ಯ

ಮನುಷ್ಯರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ಹತ್ತಿಕ್ಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರ ತೆಗೆದುಗೊಳ್ಳಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ನಾಗರಿಕ ಸರಕಾರ ಎನ್ನುವುದು, ಗೃಹ ಸಚಿವರು ಎನ್ನುವವರು ಇದ್ದಾರೆಯೇ? ಎಂದು ಕೇಂದ್ರ ಸಚಿವರು ಕಿಡಿಕಾರಿದರು.

2018ರಲ್ಲಿ ನನ್ನ ಅಧಿಕಾರದ ಅವಧಿಯಲ್ಲಿ ಇಂಥ ಫೈನಾನ್ಸ್ ಗಳಿಂದ ಜನರನ್ನು ರಕ್ಷಣೆ ಮಾಡಬೇಕು ಎಂದು ಋಣಮುಕ್ತ ಕಾಯ್ದೆ ಜಾರಿಗೆ ತಂದೆ. ನನ್ನ ಸರಕಾರ ಹೋಯಿತು, ಆ ಕಾಯ್ದೆಯನ್ನು ಕಸದ ಬುಟ್ಟಿಗೆ ಹಾಕಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ಜನರು ಪಡೆದ ಸಾಲವನ್ನು ತೀರಿಸಲಾಗದ ಪರಿಸ್ಥಿತಿ ಸೃಷ್ಟಿಯಾದರೆ ಅದಕ್ಕೆ ಪರಿಹಾರೋಪಾಯ ಏನು? ಎಂಬ ಬಗ್ಗೆ ನಾನು ಆಗ ಆಲೋಚನೆ ಮಾಡಿದ್ದೆ. ಆ ಸಂದರ್ಭದಲ್ಲಿ ಕೇರಳ ಸರ್ಕಾರ ಈ ಸಮಸ್ಯೆ ಬಗೆಹರಿಸಲು ಒಂದು ಆಯೋಗವನ್ನು ರಚನೆ ಮಾಡಿತ್ತು. ಆ ಮಾಹಿತಿ ನನಗಿತ್ತು. ಕೇರಳಕ್ಕೆ ತೆರಳಿ ಖುದ್ದು ಆ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ನಾನು ಅಂದಿನ ನನ್ನ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದ ಬಂಡೆಪ್ಪ ಕಾಶೆಂಪೂರ್ ನೇತೃತ್ವದ ನಿಯೋಗವನ್ನು ಕೇರಳಕ್ಕೆ ಕಳಿಸಿದ್ದೆ. ಅದನ್ನು ಆಧಾರವಾಗಿ ಇಟ್ಟುಕೊಂಡು ನಾನು ಇಲ್ಲಿ ಋಣಮುಕ್ತ ಕಾಯ್ದೆಯನ್ನು ಜಾರಿಗೆ ತಂದೆ. ಆಮೇಲೆ ಅದು ಏನಾಯಿತು? ಎಂದು ಅವರು ಪ್ರಶ್ನಿಸಿದರು.

ನನ್ನ ಸರಕಾರ ಹೋದ ನಂತರ ಬಂದ ಸರ್ಕಾರಗಳು ಈ ಕಾಯ್ದೆಯ ಮಹತ್ವವನ್ನೇ ಅರಿತುಕೊಳ್ಳಲಿಲ್ಲ. ಅದರ ಪರಿಣಾಮವೇ ಮೈಕ್ರೋ ಫೈನಾನ್ಸ್ ಗಳ ಉಪಟಳ ಜಾಸ್ತಿ ಆಗಿರುವುದು. ಖಾಸಗಿ ಹಣಕಾಸು ಸಂಸ್ಥೆಗಳು ಯಾವುದೇ ಪರವಾನಗಿ ಅಥವಾ ಅನುಮತಿಯನ್ನೇ ಪಡೆಯದೇ ಕಾನೂನುಬಾಹಿರವಾಗಿ ಈ ರೀತಿ ಹೆಚ್ಚಿನ ಬಡ್ಡಿಗೆ ಸಾಲ ನೀಡಿ ಜನರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಾಳಲಾರದೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ, ಊರನ್ನೇ ಖಾಲಿ ಮಾಡಿ ಹೋಗುವ ದುಸ್ಥಿತಿ ಸೃಷ್ಟಿಯಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಜನರು ಹಳ್ಳಿಗಳನ್ನು ಬಿಟ್ಟಿದ್ದರು. ಮನೆಗಳಿಗೆ ಬೀಗ ಹಾಕಿ ಸಾಲಗಾರರಿಂದ ತಪ್ಪಿಸಿಕೊಂಡರೆ ಸಾಕು ಎನ್ನುವ ಭೀತಿಗೆ ಸಿಲುಕಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇಪದೆ ಹೇಳುತ್ತಾರೆ, ನಾನು ಇಪ್ಪತ್ತು ಸಲವೋ ಮೂವತ್ತು ಸಲವೋ ಚಾಮರಾಜನಗರಕ್ಕೆ ಭೇಟಿ ನೀಡಿದ್ದೇನೆ. ನನ್ನ ಅಧಿಕಾರ ಹೋಗಿಲ್ಲ, ಗಟ್ಟಿಯಾಗಿದ್ದೇನೆ ಎಂದು ಹೇಳುತ್ತಾರೆ. ಅವರೇನೋ ಗಟ್ಟಿಯಾಗಿದ್ದಾರೆ. ಆದರೆ, ನಿಮ್ಮನ್ನು ಮುಖ್ಯಮಂತ್ರಿ ಜಾಗದಲ್ಲಿ ಕೂರಿಸಿರುವ ಆ ಜನ ಏನಾಗಿದ್ದಾರೆ? ಅವರನ್ನು ಗಟ್ಟಿ ಮಾಡಲಿಕ್ಕೆ ಏನು ಮಾಡಿದ್ದೀರಿ? ಅದು ನನ್ನ ಪ್ರಶ್ನೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹಾಡಹಗಲೇ ಬ್ಯಾಂಕ್ ಗಳಿಗೆ ನುಗ್ಗಿ ಲೂಟಿ ಮಾಡಲಾಗುತ್ತಿದೆ. ಎಟಿಎಂ ಗಳಿಗೆ ಹಣ ತುಂಬುವ ಸಿಬ್ಬಂದಿಯನ್ನು ಗುಂಡಿಟ್ಟು ಕೊಂದು ಹಗಲಲ್ಲೇ ಹಣ ದೋಚಿ ನೆರೆ ರಾಜ್ಯಕ್ಕೆ ಪರಾರಿ ಆಗುವುದು.. ಹೀಗೆ ಅಪರಾಧ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿವೆ. ರಾಜ್ಯದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ನನಗೇನು ಸಂಬಂಧ ಇಲ್ಲವೆಂದು ಗೃಹ ಸಚಿವರು ಹೇಳಿದರೆ ಅರ್ಥವೇನು? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನುಬಾಹಿರವಾಗಿ ಮೈಕ್ರೋ ಫೈನಾನ್ಸ್ ಮಾಡಲಿಕ್ಕೆ ಖಾಸಗಿ ಕಂಪನಿಗಳಿಗೆ ಅನುಮತಿ ಕೊಟ್ಟವರು ಯಾರು? ಸರಕಾರ ಅನುಮತಿ ಕೊಟ್ಟಿದೆಯಾ? ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯ ನೀಡಿದರೆ ಮೈಕ್ರೋ ಫೈನಾನ್ಸ್ ಗಳ ಬಳಿಗೆ ಸಾಲಕ್ಕೆ ಏತಕ್ಕೆ ಹೋಗುತ್ತಾರೆ? ಎಂದು ಕೇಂದ್ರ ಸಚಿವರು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಆಂದೋಲನ ಡೆಸ್ಕ್

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago