Mysore
29
few clouds

Social Media

ಸೋಮವಾರ, 23 ಮಾರ್ಚ್ 2026
Light
Dark

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿದ ಟಿ.ಬಿ ಜಯಚಂದ್ರ

ನವದೆಹಲಿ:  ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಇಂದು(ಜೂ.27) ದೆಹಲಿಯಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು  ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚಿಸಿದರು.

ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು,  ಪಕ್ಷ ಭೇದ ಮರೆತು  ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ.  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಬಗ್ಗೆ  ಸಕಾರಾತ್ಮಕವಾಗಿದ್ದಾರೆ. ಎಲ್ಲರೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ, ಹೆಚ್ಚು ಅನುದಾನವನ್ನು ಪಡೆದು, ರಾಜ್ಯದ ಅಭಿವೃದ್ಧಿ ಮಾಡೋಣ. ಜೊತೆಗೆ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.

ಟಿ.ಬಿ.ಜಯಚಂದ್ರ ಅವರು ಸಹ ರಾಜ್ಯದ ಸಮಗ್ರ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

Tags:
error: Content is protected !!