ನವದೆಹಲಿ: ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಇಂದು(ಜೂ.27) ದೆಹಲಿಯಲ್ಲಿ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದ ಬಾಕಿ ಕೈಗಾರಿಕಾ ಯೋಜನೆಗಳ ಬಗ್ಗೆ ಚರ್ಚಿಸಿದರು.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, ಪಕ್ಷ ಭೇದ ಮರೆತು ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಬಗ್ಗೆ ಸಕಾರಾತ್ಮಕವಾಗಿದ್ದಾರೆ. ಎಲ್ಲರೂ ಸೇರಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ, ಹೆಚ್ಚು ಅನುದಾನವನ್ನು ಪಡೆದು, ರಾಜ್ಯದ ಅಭಿವೃದ್ಧಿ ಮಾಡೋಣ. ಜೊತೆಗೆ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಮುಗಿಸೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಟಿ.ಬಿ.ಜಯಚಂದ್ರ ಅವರು ಸಹ ರಾಜ್ಯದ ಸಮಗ್ರ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…