Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಕೇಂದ್ರ ಸಚಿವ ಕುಮಾರಸ್ವಾಮಿಗೆ ಬಿಗ್‌ ರಿಲೀಫ್‌ : ಎಸ್‌ಐಟಿಗೆ ʻಹೈʼ ತಡೆ

ಬೆಂಗಳೂರು : ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ಎಸ್‍ಐಟಿಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೀಗ್ ರಿಲೀಪ್ ಸಿಕ್ಕಿದಂತಾಗಿದೆ.

ನ್ಯಾ. ಇಂದಿರೇಶ್ ಅವರು ಎಸ್‍ಐಟಿ ರಚನೆಗೆ ಮಧ್ಯಂತರ ತಡೆ ನೀಡಿದ್ದಾರೆ. ಕಳೆದ ಜನವರಿ ತಿಂಗಳಿನಲ್ಲಿ ರಾಜ್ಯ ಸರ್ಕಾರ ಒತ್ತುವರಿ ಪತ್ತೆಗಾಗಿ ಐಎಎಸ್ ಅಧಿಕಾರಿ ಆಮ್ಲನ್, ಆದಿತ್ಯ ಬಿಶ್ವಾಸ್ ಅವರ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಿತ್ತು. ಕೇತಗಾನಹಳ್ಳಿ ಗ್ರಾಮದ 6 ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಲಾಗಿದ್ದು, ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು.‌

ರಾಜ್ಯ ಸರ್ಕಾರ ಎಸ್‍ಐಟಿ ರಚನೆ ಮಾಡಿರುವುದನ್ನು ಪ್ರಶ್ನಿಸಿ ಎಚ್.ಡಿ.ಕುಮಾರಸ್ವಾಮಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅಧಿಸೂಚನೆಯಿಲ್ಲದೇ ಎಸ್‍ಐಟಿ ರಚನೆ ಮಾಡಿರುವುದು ಕಾನೂನು ಬಾಹಿರ, ಎಸ್‍ಐಟಿ ಕೈಗೊಂಡಿರುವ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಕುಮಾರಸ್ವಾಮಿ ಅವರ ಪರ ಹಿರಿಯ ವಕೀಲ ಉದಯ್‍ಹೊಳ್ಳ ಮತ್ತು ಎ.ವಿ.ನಿಶಾಂತ್ ಅವರು ವಾದ ಮಂಡಿಸಿದರು.

ಉದಯ್ ಹೊಳ್ಳ, ಎ.ವಿ.ನಿಶಾಂತ್ ವಾದ

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಎಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಹೆಚ್‍ಡಿ ಕುಮಾರಸ್ವಾಮಿ ಪರ ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಎ.ವಿ.ನಿಶಾಂತ್ ವಾದ ಮಂಡಿಸಿದ್ದು, ಅಧಿಸೂಚನೆಯಿಲ್ಲದೇ ಎಸ್‍ಐಟಿ ರಚನೆ ಕಾನೂನುಬಾಹಿರ. ಎಸ್‍ಐಟಿಯ ಕ್ರಮಗಳನ್ನು ಅನೂರ್ಜಿತವೆಂದು ಘೋಷಿಸಲು ಮನವಿ ಮಾಡಿದರು.

ಇನ್ನು ಜನವರಿ ತಿಂಗಳಿನಲ್ಲಿ ಸರ್ಕಾರ ಒತ್ತುವರಿ ಪತ್ತೆಗೆ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್‍ಐಟಿ ರಚಿಸಲಾಗಿತ್ತು. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಎಸ್ಐಟಿ ರಚನೆ ಮಾಡಲಾಗಿತ್ತು. 6 ಎಕರೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿದ್ದರು.

ಫೆಬ್ರವರಿ 18 ರಂದು ಕೇತಗಾನಹಳ್ಳಿ ಗ್ರಾಮದ ಸರ್ವೆ ನಂಬರ್ 7,8,9,10,16,17 ಹಾಗೂ 79ರಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆ ಜಂಟಿ ಸರ್ವೆ ಕಾರ್ಯ ನಡೆಸಿತ್ತು. ಸರ್ವೆ ಕಾರ್ಯದ ವೇಳೆ ಕುಮಾರಸ್ವಾಮಿ ಸೇರಿದಂತೆ ಇತರರು ಸೇರಿ 14 ಕ್ಕೂ ಹೆಚ್ಚು ಎಕರೆ ಒತ್ತುವರಿ ಮಾಡಿರುವುದು ಗೊತ್ತಾಗಿತ್ತು. ಈ ನಿಟ್ಟಿನಲ್ಲಿ ಭೂ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗಿತ್ತು. ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ರೋವರ್ ಯಂತ್ರದ ಮೂಲದ ಸರ್ಕಾರಿ ಒತ್ತುವರಿ ಜಾಗದ ಮಾರ್ಕಿಂಗ್ ಕಾರ್ಯ ಮಾಡಿ ರೆಡ್ ಫ್ಲ್ಯಾಗ್ ಕೂಡ ನೆಡಲಾಗಿತ್ತು.

ಕೇತಗಾನಹಳ್ಳಿ ಸರ್ವೆ ನಂಬರ್ 7,8,9 ರಲ್ಲಿ ಕುಮಾರಸ್ವಾಮಿ ಜಮೀನು ಸೇರಿದಂತೆ 11 ಎಕರೆಯಷ್ಟು ಮಾರ್ಕಿಂಗ್ ಕಾರ್ಯ ಕೂಡ ನಡೆದಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಇತರೆ ಒತ್ತುವರಿದಾರರಿಗೆ ರಾಮನಗರ ಜಿಲ್ಲಾಡಳಿತ ನೋಟೀಸ್ ನೀಡಲಾಗಿತ್ತು.

Tags:
error: Content is protected !!