ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: ಸರ್ಕಾರದ ಪ್ರತೀ ಹಂತದಲ್ಲೂ ಕಮಿಷನ್ ಹಾವಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಷನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಹೆಚ್.ಕೆ. ಪಾಟೀಲ್ ಏನು ಮಾಡುತ್ತಿದ್ದರು;
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ. ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…