ರಾಜ್ಯ

ಬೆಂಗಳೂರು| ಭೀಮಾ ಹೆಜ್ಜೆ ಶತಮಾನದ ಸಂಭ್ರಮಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ನಿಪ್ಪಾಣಿಗೆ ಭೇಟಿ ನೀಡಿದ ಹಿನ್ನೆಲೆ ಭೀಮಾ ಹೆಜ್ಜೆ ಶತಮಾನದ ಸಂಭ್ರಮ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಚಾಲನೆ ನೀಡಿದ್ದಾರೆ.

ಡಾ. ಬಿ. ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು 100 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ‘ಬೆಂಗಳೂರಿನಿಂದ ನಿಪ್ಪಾಣಿ’ವರೆಗೆ ಏಪ್ರಿಲ್ 11 ರಿಂದ 14ರವರೆಗೆ ಹಮ್ಮಿಕೊಂಡಿರುವ ‘ಭೀಮ ಹೆಜ್ಜೆ 100 ರ ಸಂಭ್ರಮ’ ಜನ ಜಾಗೃತಿ ಕಾರ್ಯಕ್ರಮದ ಉದ್ಘಾಟನೆಯನ್ನು ಇಂದು(ಏಪ್ರಿಲ್‌.11)ವಿಧಾನಸೌಧದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಹ್ಲಾದ್‌ ಜೋಶಿ ಅವರು, ಸರಿಯಾಗಿ 100 ವರ್ಷಗಳ ಹಿಂದೆ 1925ರ ಏಪ್ರಿಲ್ 10, 11 ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಭೇಟಿ ನೀಡಿದ್ದರು. ಬಹಿಷ್ಕೃತ ಹಿತಕಾರಿಣಿ ಸಭಾದ ಎರಡು ದಿನ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ವಸತಿ ಶಾಲೆಯ ಅಗತ್ಯದ ಬಗ್ಗೆ ಮಾತನಾಡಿದ್ದರು. ಆ ಐತಿಹಾಸಿಕ ಭೀಮಹೆಜ್ಜೆಗೆ ಶತಮಾನದ ಸಂಭ್ರಮ. ಈ ಭೀಮ ಹೆಜ್ಜೆ ಸಂಭ್ರಮ ಸತತ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯಲಿದ್ದು 15ನೇ ತಾರೀಕಿಗೆ ನಿಪ್ಪಾಣಿಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಏಪ್ರಿಲ್‌ 11 ರಿಂದ 15 ವರೆಗೆ ಬೆಂಗಳೂರಿನಿಂದ ನಿಪ್ಪಾಣಿಯವರೆಗೆ ಬೈಕ್ ಜಾಥಾವನ್ನು ಈ ಶತಮಾನ ಸಮಾರಂಭದ ನಿಮಿತ್ತ ಹಮ್ಮಿ ಕೊಳ್ಳಲಾಗಿದೆ ಎಂದು ಹೇಳಿದರು.

ಇನ್ನೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದರೂ ಭೀಮಹೆಜ್ಜೆ ಶತಮಾನದ ಸಂಭ್ರಮ ಮಾಡದೇ ಅಗೌರವ ತೋರಿದೆ. ಮೊನ್ನೆ ಮೊನ್ನೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ನಡೆಸಿಕೊಂಡ ರೀತಿ ಅಪಮಾನ ತೋರಿದೆ. ಇದು ಕಾಂಗ್ರೆಸ್ ಈಗಲೂ ಪಾಲಿಸುತ್ತಿರುವ ಪದ್ದತಿಯಾಗಿದೆ ಎಂದರು.

ಅರ್ಚನ ಎಸ್‌ ಎಸ್

Recent Posts

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

41 mins ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

53 mins ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

2 hours ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

3 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

4 hours ago